ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 36,594 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 95,71,559ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 540 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,39,188ಕ್ಕೆ ಏರಿಕೆಯಾಗಿದೆ. ದೇಶದಲಿ 95,71,559ಮಂದಿ ಸೋಂಕಿತರ ಪೈಕಿ ಈವರೆಗೆ 90,16,289 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 4,16,082 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










