ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 36,652 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 96,08,211 ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 540 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,39,700 ಕ್ಕೆ ಏರಿಕೆಯಾಗಿದೆ. ದೇಶದಲಿ 96,08,211 ಮಂದಿ ಸೋಂಕಿತರ ಪೈಕಿ ಈವರೆಗೆ 90,58,822 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 4,09,689 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










