ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 38,772 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 94,31,692ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 443 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,37,139 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 94,31,692 ಮಂದಿ ಸೋಂಕಿತರ ಪೈಕಿ ಈವರೆಗೆ 88,47,600 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 4,46,952 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










