ಬೆಂಗಳೂರು : ‘ಸ್ಯಾಂಡಲ್‍ವುಡ್ ಕ್ವೀನ್’ ರಮ್ಯಾ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಅವರ ಜನ್ಮದಿನಕ್ಕೆ ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ಶುಭಾಶಯ ಕೋರುತ್ತಿದ್ದಾರೆ.
ರಮ್ಯಾ ಅವರು ಸಿನಿಮಾಗಳಲ್ಲಿ ಕಾಣಿಸಿಕೊಳ್ಳದೇ ಹಲವು ವರ್ಷಗಳೇ ಕಳೆದಿದ್ದರೂ ಕೂಡ ಅವರ ಬಗ್ಗೆ ಅಭಿಮಾನಿಗಳಿಗೆ ಕ್ರೇಜ್ ಕಮ್ಮಿ ಆಗಿಲ್ಲ. ಕೇವಲ ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು ಭಾಷೆಯ ಸಿನಿಮಾಗಳಲ್ಲಿಯೂ ನಟೊಸಿರುವ ರಮ್ಯಾ ವಯಸ್ಸು ಎಷ್ಟೇ ಆದರೂ ಇನ್ನೂ ಟೀನೆಜ್ ಹುಡುಗಿಯಂತೆ ಕಾಣುತ್ತಾರೆ.
ರಮ್ಯಾ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ವಿಶೇಷ ದಿನದಂದು ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದು, ಶುಭಾಶಯ ತಿಳಿಸಿದ ಪ್ರೀತಿಯ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ನನಗೆ ಶುಭಾ ಕೋರಿದ ಎಲ್ಲರಿಗೂ ಧನ್ಯವಾದಗಳು. ಸದ್ಯ ಅಟ್ಲಾಂಟಿಕ್ ಸಾಗದಲ್ಲೆಲ್ಲೋ ಇದ್ದೇನೆ. ತುಂಬಾ ಸುಸ್ತಾಗುತ್ತಿದೆ. ನಿದ್ರೆ ಬರುತ್ತಿದೆ. ಎಲ್ಲರೂ ಸುರಕ್ಷಿತವಾಗಿರಿ. ಮಾಸ್ಕ್ ಧರಿಸಿ ಎಂದು ಕ್ಯಾಪ್ಷನ್ ನಲ್ಲಿ ಬರೆದುಕೊಂಡಿದ್ದಾರೆ.










