4ರ ಬಾಲಕಿ ಮೇಲೆ ಅತ್ಯಾಚಾರ ಆರೋಪ – 16 ವರ್ಷದ ಅಪ್ರಾಪ್ತ ಪೊಲೀಸರ ವಶಕ್ಕೆ…

73
firstsuddi

ಕಲಬುರಗಿ : 4 ವರ್ಷದ ಬಾಲಕಿ ಮೇಲೆ 16 ವರ್ಷದ ಅಪ್ರಾಪ್ತ ಬಾಲಕ ಅತ್ಯಾಚಾರ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣ ಸಂಬಂಧ ಪೊಲೀಸರು 16 ವರ್ಷದ ಅಪ್ರಾಪ್ತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಬಾಲಕಿ ಚಾಕೊಲೇಟ್ ತರಲು ಅಂಗಡಿಗೆ ತೆರಳಿದ್ದಳು. ಈ ವೇಳೆ ಬಾಲಕಿಯನ್ನು ಒಳಗೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿದೆ ಎಂಬ ಆರೋಪ ಕೇಳಿ ಬಂದಿವೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಎಸ್ಪಿ ಇಶಾ ಪಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.