ಬೆಂಗಳೂರು : ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಅವರಿಗೆ ಬಡ್ತಿ ನೀಡಿ ಐಜಿಪಿ ಇಂಟಲಿಜೆನ್ಸ್ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಲಾಬೂರಾಮ್ ಅವರಿಂದ ತೆರವಾದ ಸ್ಥಾನಕ್ಕೆ ರಮಣ್ ಗುಪ್ತಾ ಅವರನ್ನು ನಿಯೋಜಿಸಲಾಗಿದೆ.
ಕಲಬುರಗಿಯ ಐಜಿಪಿ ಎನ್.ಸತೀಶ್ ಕುಮಾರ್ ಅವರನ್ನು ಬೆಳಗಾವಿಗೆ ವರ್ಗಾವಣೆ ಮಾಡಲಾಗಿದೆ. ಕಲಬುರಗಿಗೆ ಡಿಐಜಿಯಾಗಿ ಮೈಸೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಅನುಪಮ್ ಅಗರ್ವಾಲ್ ಅವರನ್ನು ನೇಮಿಸಲಾಗಿದೆ. ತಕ್ಷಣವೇ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ.










