4 ವರ್ಷದ ಬಾಲಕಿ ಮೇಲೆ ಸಬ್ ಇನ್ಸ್‌ಪೆಕ್ಟರ್‌ ಅತ್ಯಾಚಾರ…

76
firstsuddi

ಜೈಪುರ: 4 ವರ್ಷದ ಬಾಲಕಿ ಮೇಲೆ ಸಬ್ ಇನ್ಸ್‌ಪೆಕ್ಟರ್‌ ಒಬ್ಬ ಅತ್ಯಾಚಾರವೆಸಗಿರುವ ಹೀನಾಯ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಡೆದಿದೆ.

ಭೂಪೇಂದ್ರ ಸಿಂಗ್ ಎಂಬ ಆರೋಪಿ ಸಬ್ ಇನ್ಸ್‌ಪೆಕ್ಟರ್‌ ಆಗಿ ಕೆಲಸ ಮಾಡುತ್ತಿದ್ದು, ನಿನ್ನೆ ಮಧ್ಯಾಹ್ನ 4 ವರ್ಷದ ಬಾಲಕಿಯನ್ನು ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಆರೋಪಿ ಅತ್ಯಾಚಾರ ಎಸಗಿದ ನಂತರ ಸಮೀಪದಲ್ಲಿ ವಾಸಿಸುವ ಕುಟುಂಬಸ್ಥರು ದೂರು ನೀಡಿದ್ದು, ಎಸ್ಐ ಭೂಪೇಂದ್ರ ರಾಹುವಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ತಿಳಿಯುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು ಠಾಣೆಗೆ ನುಗ್ಗಿ ಪೊಲೀಸ್ ಅಧಿಕಾರಿಯನ್ನ ಹಿಗ್ಗಾಮುಗ್ಗ ಥಳಿಸಿ, ಮೇಲಾಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಸದ್ಯ ಠಾಣೆಯ ಮುಂದೆ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿರುವ ಗ್ರಾಮಸ್ಥರು ಆರೋಪಿ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.

ಸದ್ಯ ಮಗುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಆರೋಪಿಯನ್ನ ಬಂಧಿಸಿ ತನಿಖೆ ನಡೆಸುತ್ತಿದ್ದು, ಕಠಿಣ ಕ್ರಮ ಕೈಗೊಳ್ಳುವುದಾಗಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಬಜರಂಗ್ ಸಿಂಗ್ ತಿಳಿಸಿದ್ದಾರೆ.