ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ…

247
firstsuddi

ಬಾಗಲಕೋಟೆ: ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಚಿಕ್ಕಮಾಗಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಬಿಸಿ ಊಟ ಸೇವಿಸಿದ  ವಿದ್ಯಾರ್ಥಿಗಳು ವಾಂತಿ ಮತ್ತು  ಭೇದಿಯಿಂದ ಬಳಲುತ್ತಿದ್ದು, ಅವರನ್ನು ಚಿಕಿತ್ಸೆಗಾಗಿ  ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು,ಶಾಲೆಯಲ್ಲಿ 190 ಮಕ್ಕಳು ಇದ್ದರು ಎನ್ನಲಾಗುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಶಾಲೆಯಲ್ಲಿದ್ದ ಎಲ್ಲಾ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಕರೆತರಲಾಗುತ್ತಿದೆ ಎಂದು ತಿಳಿದು ಬಂದಿದೆ.