ದೇಶದಲ್ಲಿ ಒಂದೇ ದಿನ 41,322 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 93,51,110ಕ್ಕೆ ಏರಿಕೆ…

108
firstsuddi

ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 41,322 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 93,51,110ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 485 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,36,200ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 93,51,110 ಮಂದಿ ಸೋಂಕಿತರ ಪೈಕಿ ಈವರೆಗೆ 87,59,969 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 4,54,940 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.