ದೇಶದಲ್ಲಿ ಒಂದೇ ದಿನ 45,882 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 90,04,366 ಕ್ಕೆ ಏರಿಕೆ…

182
firstsuddi

ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 45,882 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 90,04,366 ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 584 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,32,162 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 90,04,366 ಮಂದಿ ಸೋಂಕಿತರ ಪೈಕಿ ಈವರೆಗೆ 84,28,410 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 4,43,794 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.