ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 46,232 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 90,50,598ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 564 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,32,726ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 90,50,598 ಮಂದಿ ಸೋಂಕಿತರ ಪೈಕಿ ಈವರೆಗೆ 84,78,124 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 4,39,747 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










