5ಮಂದಿ ನಕ್ಸಲರನ್ನು ಹೊಡೆದುರುಳಿಸಿದ ಭಾರತೀಯ ಸೇನೆ…

304
firstsuddi

ಛತ್ತೀಸ್ಘಡ : ನಕ್ಸಲರು ಹಾಗೂ ಸೇನಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಕಾರ್ಯಾಚರಣೆ ವೇಳೆ ಸೇನಾ ಪಡೆ 5 ಮಂದಿ ನಕ್ಸಲರನ್ನು ಹೊಡೆದುರುಳಿಸಿದ್ದು, ಗುಂಡಿನ ಚಕಮಕಿಯಲ್ಲಿ ಇಬ್ಬರು ಭಾರತೀಯ ಯೋಧರು ಗಾಯಗೊಂಡಿದ್ದಾರೆ. ಛತ್ತೀಸ್ಘಡದ ನಾರಾಯಣ ಪುರ ಜಿಲ್ಲೆಯ ಅಬುಜ್ಮದ್ ಅರಣ್ಯ ಪ್ರದೇಶದಲ್ಲಿ ನಕ್ಸಲರು ಅಡಗಿ ಕುಳಿತಿರುವ ಖಚಿತ ಮಾಹಿತಿಯನ್ನು ತಿಳಿದ ಭದ್ರತಾ ಪಡೆಗಳು ನಕ್ಸಲರಿರುವ ಪ್ರದೇಶವನ್ನು ಸುತ್ತುವರೆದು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ನಕ್ಸಲರು ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿದಾಳಿ ನಡೆಸಿದ ಭಾರತೀಯ ಯೋಧರು 5 ಮಂದಿ ನಕ್ಸಲರನ್ನು ಹೊಡೆದುರುಳಿಸಿದ್ದಾರೆ. ಘಟನಾ ಪ್ರದೇಶದಲ್ಲಿ ಇನ್ನು ಗುಂಡಿನ ಚಕಮಕಿ ಮುಂದುವರೆದಿದ್ದು, ಹೆಚ್ಚುವರಿ ಸೈನಿಕರನ್ನು ರವಾನಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.