5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ…

50
firstsuddi

ಬೆಂಗಳೂರು: 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿ ಆದೇಶ ಹೊರಡಿಸಿದೆ.

ಹೈಕೋರ್ಟ್​ನ ಏಕಸದಸ್ಯ ಪೀಠದ ಶಾಲೆಗಳ ಬೋರ್ಡ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ವಿಭಾಗೀಯ ಪೀಠ ತಡೆಹಿಡಿದಿದ್ದು, ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ನಿಗದಿಯಂತೆ ಸೋಮವಾರದಿಂದ ಬೋರ್ಡ್ ಪರೀಕ್ಷೆಗಳು ನಡೆಯಲಿವೆ.

2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಿತ್ತು. ಇದರಿಂದ ಸರ್ಕಾರ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿತ್ತು.