5, 8, 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ…

54
firstsuddi

ಬೆಂಗಳೂರು: 5, 8, 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಕರ್ನಾಟಕ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಶಿಕ್ಷಣ ಇಲಾಖೆ ವೇಳಾಪಟ್ಟಿ ಬಿಡುಗಡೆಗೊಳಿಸಿದೆ.

ಮಾರ್ಚ್ 25 ರಿಂದ ಬಾಕಿ ವಿಷಯಗಳಿಗೆ 28ರ ವರೆಗೆ ಪರೀಕ್ಷೆಗಳು ನಡೆಯಲಿವೆ. ಎಸ್​ಎಸ್​ಎಲ್​ಸಿ ಪರೀಕ್ಷೆ ಇಲ್ಲದ ದಿನ ಬೆಳಿಗ್ಗೆ ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಪ್ಲಾನ್ ಮಾಡಿದೆ. ಇನ್ನು, ಉಳಿದ ದಿನ ಮಧ್ಯಾಹ್ನ ಅವಧಿಯಲ್ಲೇ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.
ಮಾರ್ಚ್ 25ನೇ ತಾರೀಕಿನಿಂದ ಎಸ್​ಎಸ್​ಎಲ್​ಸಿ ವಾರ್ಷಿಕ ಪರೀಕ್ಷೆಗಳು ಆರಂಭವಾಗುತ್ತಿದ್ದು, ಎಸ್​ಎಸ್​ಎಲ್​ಸಿ ಪರೀಕ್ಷೆಗಳಿರುವ ದಿನಾಂಕ 25-3-24ರ ಸೋಮವಾರ ಮತ್ತು 27-3-24ರ ಬುಧವಾರದಂದು ಮಧ್ಯಾಹ್ನದ ಅವಧಿಯಲ್ಲಿ ಹಾಗೂ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ಇಲ್ಲದಿರುವ ದಿನಾಂಕ 26-3-24 ರ ಮಂಗಳವಾರ ಮತ್ತು 28-3-24 ರ ಗುರುವಾರದಂದು ಬೆಳಗಿನ ಅವಧಿಯಲ್ಲಿ 5, 8 ಮತ್ತು 9ನೇ ತರಗತಿಯ ಮೌಲ್ಯಾಂಕವನ್ನು ನಡೆಸಲಾಗುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಮುಂಬರುವ ಶೈಕ್ಷಣಿಕ ವರ್ಷಗಳಿಗೆ ಇದೇ ರೀತಿಯ ಮೌಲ್ಯಮಾಪನಗಳನ್ನು ಆದೇಶಿಸುವ ಮೊದಲು ಮಧ್ಯಸ್ಥಗಾರರನ್ನು ಸಂಪರ್ಕಿಸುವಂತೆ ವಿಭಾಗೀಯ ಪೀಠವು ಸರ್ಕಾರಕ್ಕೆ ನಿರ್ದೇಶನ ನೀಡಿದೆ.

5, 8, 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ವೇಳಾಪಟ್ಟಿ:-
5ನೇ ತರಗತಿ:-
• ಮಾರ್ಚ್ 25- ಪರಿಸರ ಅಧ್ಯಯನ
• ಮಾರ್ಚ್ 26- ಗಣಿತ

8ನೇ ತರಗತಿ:-
• ಮಾರ್ಚ್ 25- ತೃತೀಯ ಭಾಷೆ
• ಮಾರ್ಚ್ 26- ಗಣಿತ
• ಮಾರ್ಚ್ 27- ವಿಜ್ಞಾನ
• ಮಾರ್ಚ್ 28- ಸಮಾಜ ವಿಜ್ಞಾನ

9ನೇ ತರಗತಿ:-
• ಮಾರ್ಚ್ 25- ತೃತೀಯ ಭಾಷೆ
• ಮಾರ್ಚ್ 26- ಗಣಿತ
• ಮಾರ್ಚ್ 27- ವಿಜ್ಞಾನ
• ಮಾರ್ಚ್ 28- ಸಮಾಜ ವಿಜ್ಞಾನ.