5, 8,9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಆದೇಶ…

72
firstsuddi

ಬೆಂಗಳೂರು: ಸಾಕಷ್ಟು ವಿರೋಧಗಳ ನಡುವೆಯೇ 5, 8, 9 ಮತ್ತು 11 ನೇ ತರಗತಿಗೆ ಬೋರ್ಡ್ ಎಕ್ಸಾಂ ಮಾಡಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಸುತ್ತೋಲೆ ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ.

ನ್ಯಾ.ರವಿ ಹೊಸಮನಜ ಅವರಿಂದ ಆದೇಶ ಹೊರಬಿದ್ದಿದ್ದು, ರಾಜ್ಯ ಸರ್ಕಾರಕ್ಕೆ ಹಿನ್ನೆಡೆಯಾಗಿದೆ. ಡಿಸೆಂಬರ್ 2023ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ (ರುಪ್ಸಾ) ಸಂಘ ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ 5,8,9,11 ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿದೆ.