ಬೆಳಗಾವಿ : ಹಲಸಿ ಗ್ರಾಮದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿಯಿಟ್ಟ ಪ್ರಕರಣಕ್ಕೆ ಮೂವರು ಆರೋಪಿಗಳನ್ನು ನಂದಗಡ ಪೊಲೀಸರು ಬಂಧಿಸಿದ್ದಾರೆ.
ಸಂಜು ಗುರವ್, ಸಚಿನ್ ಗುರವ್, ಗಣೇಶ ಪೆಡ್ನೇಕರ್ ಬಂಧಿತ ಆರೋಪಿಗಳು. ನಗರದ ಗ್ರಾಮ ಪಂಚಾಯಿತಿ ಕಟ್ಟಡದಲ್ಲಿದ್ದ ಕನ್ನಡ ಬಾವುಟಕ್ಕೆ ಆರೋಪಿಗಳು ಬೆಂಕಿ ಹಚ್ಚಿ ಬಳಿಕ ಬಸವಣ್ಣನವರ ಮೂರ್ತಿಗೆ ಕಪ್ಪು ಮಸಿ ಬಳಿದು ಪುಂಡಾಟ ಮೆರೆದಿದ್ದರು.
ಘಟನೆ ಸಂಬಂಧ ನಂದಗಡ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 153A, 295, 427, 120Bರ ಅಡಿಯಲ್ಲಿ ಕೇಸ್ ದಾಖಲಾಗಿದೆ.










