545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ; ಮರುಪರೀಕ್ಷೆಗೆ ಸರ್ಕಾರ ನಿರ್ಧಾರ…

53
firstsuddi

ಬೆಂಗಳೂರು : 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮರುಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡದಿಂದ ಸರ್ಕಾರಕ್ಕೆ ಪ್ರಾಥಮಿಕ ವರದಿ ಸಲ್ಲಿಕೆಯಾಗಿದೆ. ಪರೀಕ್ಷೆ ಪಾರದರ್ಶಕವಾಗಿ ನಡೆದಿಲ್ಲ. ದೈಹಿಕ ಪರೀಕ್ಷೆಯಲ್ಲೂ ಅಕ್ರಮ ನಡೆದಿದೆ ಎಂದು ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ನೇಮಕಾತಿ ರದ್ದುಗೊಳಿಸಿ ಮರುಪರೀಕ್ಷೆಗೆ ಸರ್ಕಾರ ತೀರ್ಮಾನಿಸಿದೆ.

545 ಪಿಎಸ್ಐ ಹುದ್ದೆಗಳಿಗೆ ಕಳೆದ ವರ್ಷ ನಡೆಸಲಾದ ಪರೀಕ್ಷೆಯನ್ನು ಸಂಪೂರ್ಣ ರದ್ದುಪಡಿಸಿ ಮತ್ತೊಮ್ಮೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಆದರೆ ಕಳೆದ ಬಾರಿ ಪರೀಕ್ಷೆ ವೇಳೆ ಅಕ್ರಮ ನಡೆಸಿದ್ದ ಆರೋಪಿಗಳಿಗೆ ಮರು ಪರೀಕ್ಷೆಯಿಲ್ಲ. ಶೀಘ್ರವೇ ಮರು ಪರೀಕ್ಷೆ ದಿನಾಂಕ ಪ್ರಕಟಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.