ಮಂಗಳೂರು : ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 58.95 ಲಕ್ಷ ಮೌಲ್ಯದ ಚಿನ್ನ ವಶ…

155
firstsuddi

ಮಂಗಳೂರು : ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನವನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ವಿದೇಶಿಗರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ಕೇರಳ ಮೂಲದ ಮೊಹಮ್ಮದ್ ಸ್ವಾಲಿಹ್ ಹಾಗೂ ಮೊಹಮ್ಮದ್ ನಿಶಾದ್ ಎಂದು ಗುರುತಿಸಲಾಗಿದ್ದು, ಇಬ್ಬರಿಂದ ಸುಮಾರು 58.95ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರು ಆರೋಪಿಗಳು ಬೇರೆ ಬೇರೆ ವಿಮಾನದಲ್ಲಿ ಆಗಮಿಸಿದ್ದು, ಇಬ್ಬರನ್ನು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದ್ದು, ಸದ್ಯ ಇಬ್ಬರನ್ನು ಬಂಧಿಸಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.