6ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಶಿಕ್ಷಕ!

66
firstsuddi

ಜೈಪುರ್ : 6ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದೆ.

ವಿದ್ಯಾರ್ಥಿನಿ ಮಂಗಳವಾರ ಬೆಳಗ್ಗೆ ಶಾಲೆಗೆ ಹೋದವಳು ಸಂಜೆಯಾದರೂ ಮನೆಗೆ ಬಾರದ ಕಾರಣ ಬಾಲಕಿಯ ತಾಯಿ ಶಾಲೆಯ ಬಳಿ ಹೋಗಿ ಆಕೆಗಾಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಬೀಗ ಹಾಕಿದ್ದ ಕೊಠಡಿಯಲ್ಲಿ ಬಾಲಕಿ ಅಳುತ್ತಿರುವ ಶಬ್ಧ ಕೇಳಿ ಬಾಗಿಲನ್ನು ಒಡೆದು ನೋಡಿದಾಗ ಮಗಳೊಂದಿಗೆ ಶಿಕ್ಷಕ ಇರುವುದನ್ನು ನೋಡಿದ್ದಾರೆ. ಈ ವೇಳೆ ಗಾಬರಿಗೊಂಡ ಶಿಕ್ಷಕ ಓಡಿಹೋಗಿದ್ದಾನೆ.

ಬಾಲಕಿ ನಡೆದ ಘಟನೆಯನ್ನು ತಾಯಿ ಬಳಿ ಹೇಳಿಕೊಂಡಿದ್ದು, ನಂತರ ಪೋಷಕರು ಘಟನೆ ಸಂಬಂಧ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಆರೋಪಿಯನ್ನು ನಿನ್ನೆ ಪೊಲೀಸರು ಬಂದಿಸಿದ್ದು, ಆತನ ವಿರುದ್ಧ ಐಪಿಸಿ ಸೆಕ್ಷನ್ 376 ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.