ಬೆಂಗಳೂರು : ಬೊಮ್ಮಾಯಿ ಸರ್ಕಾರ 6 ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 6 ತಿಂಗಳ ಸಾಧನೆ ಕುರಿತ ಕಿರು ಹೊತ್ತಿಗೆ ಬಿಡುಗಡೆ ಮಾಡಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು’ ಎಂಬ 82 ಪುಟಗಳ ಪುಸ್ತಕವನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದ್ದಾರೆ.
ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವರಾದ ಕೆ.ಎಸ್. ಈಶ್ವರಪ್ಪ, ಎಸ್.ಟಿ. ಸೋಮಶೇಖರ್, ಬಿ.ಸಿ. ಪಾಟೀಲ್, ಉಮೇಶ್ ಕತ್ತಿ, ಗೋಪಾಲಯ್ಯ, ಡಾ. ಸುಧಾಕರ್, ಭೈರತಿ ಬಸವರಾಜ, ವಿ. ಸೋಮಣ್ಣ, ಗೋವಿಂದ ಕಾರಜೋಳ, ಎಸ್. ಅಂಗಾರ, ಬಿ.ಸಿ. ನಾಗೇಶ್, ಎಂಟಿಬಿ ನಾಗರಾಜ್, ಸಂಸದ ಪಿ.ಸಿ. ಮೋಹನ್ ಉಪಸ್ಥಿತರಿದ್ದರು.










