ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 61,267 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 66,85,083ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 884 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,03,569 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 66,85,083ಮಂದಿ ಸೋಂಕಿತರ ಪೈಕಿ 56,62,491ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 9,19,023 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










