ಬೆಂಗಳುರು : ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ರಾಜ್ಯದಲ್ಲಿ ಇಂದು 63 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1458ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್‍ನಲ್ಲಿ ಇಂದು ಹಾಸನ ಜಿಲ್ಲೆಯೊಂದರಲ್ಲೇ 21 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಬೀದರ್-10, ಮಂಡ್ಯ-8, ಕಲಬುರಗಿ-7, ಉಡುಪಿ-6, ತುಮಕೂರು-4, ಬೆಂಗಳೂರು-4, ದಕ್ಷಿಣ ಕನ್ನಡ, ಯಾದಗಿರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದೆ. 1458 ಮಂದಿ ಸೋಂಕಿತರ ಪೈಕಿ 553 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 40 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಹಾಗೂ 864 ಮಂದಿ ರಾಜ್ಯದ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.










