65ರ ವೃದ್ಧೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಕಾಮುಕರು!

115
firstsuddi

ಕಲಬುರಗಿ : ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಜೇರಟಗಿ ಗ್ರಾಮದ ಬಸ್ ನಿಲ್ದಾಣದಲ್ಲಿ 65 ವರ್ಷದ ವೃದ್ಧ ಭಿಕ್ಷುಕಿಯ ಮೇಲೆ ಕಾಮುಕರಿಬ್ಬರು ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ. ವೃದ್ಧ ಭಿಕ್ಷುಕಿಯನ್ನು ಸಂಗನಬಸವಮ್ಮ ಎಂದು ಗುರುತಿಸಲಾಗಿದೆ. ಇವರು ಬಸ್ ನಿಲ್ದಾಣದ ಬಳಿ ಭಿಕ್ಷಾಟನೆ ಮಾಡಿ ಬಸ್ ನಿಲ್ದಾಣದಲ್ಲಿಯೇ ಜೀವನ ನಡೆಸುತ್ತಿದ್ದರು. ಭಾನುವಾರ ರಾತ್ರಿ ಪಾನಮತ್ತ ಇಬ್ಬರು ಕಾಮುಕರು ಈ ವೃದ್ಧೆಯ ಮೇಲೆ ಅತ್ಯಾಚಾರ ನಡೆಸಿ ನಂತರ ಆಕೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಸದ್ಯ ನೆಲೋಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಇನ್ನೋರ್ವ ಆರೋಪಿಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.