ಚಿಕ್ಕಬಳ್ಳಾಪುರ: ಚಿಂತಾಮಣಿ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ 65 ವರ್ಷದ ವೃದ್ದೆ ರೋಗಿಯ ಮೇಲೆ 24 ವರ್ಷದ ಯುವಕನೋರ್ವ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ.
ಆರೋಪಿಯನ್ನು ಚಿಂತಾಮಣಿ ನಗರದ ಹೈದರಾಲಿ ನಗರದ ಇರ್ಫಾನ್ ಎಂದು ಗುರುತಿಸಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದ ಇರ್ಫಾನ್, ಆಸ್ಪತ್ರೆಯ ಆಕ್ಸಿಜನ್ ಪ್ಲಾಂಟ್ ಬಳಿ ಇದ್ದ ವೃದ್ದೆ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಈ ಕುರಿತು ಚಿಂತಾಮಣಿ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿಗಳೇ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಇರ್ಫಾನ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಇನ್ನು ಅಸ್ವಸ್ಥ ವೃದ್ದೆಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಚಿಂತಾಮಣಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










