ದೇಶದಲ್ಲಿ ಒಂದೇ ದಿನ 66,732 ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 71,20,539ಕ್ಕೆ ಏರಿಕೆ…

100
firstsuddi

ನವದೆಹಲಿ : ದೇಶದಲ್ಲಿ ಕೆಲವು ದಿನಗಳಿಂದ ಮಹಾಮಾರಿ ಕೊರೊನಾ ಪಾಸಿಟಿವ್ ಪ್ರಕರಣಗಳಲ್ಲಿ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 66,732 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 71,20,539ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 816 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,09,150 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 71,20,539 ಮಂದಿ ಸೋಂಕಿತರ ಪೈಕಿ 61,49,536 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 8,61,853 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.