69ನೇ ಕನ್ನಡ ರಾಜ್ಯೋತ್ಸವ: ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ.

26

ಬೆಂಗಳೂರು: ಇಂದು ಕರ್ನಾಟಕ ರಾಜ್ಯಾದ್ಯಂತ 69ನೇ ಕನ್ನಡ ರಾಜ್ಯೋತ್ಸವ ಮನೆ ಮಾಡಿದೆ. 69ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿವಿಧ ಕನ್ನಡ ನಾಡಿನ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು. ಇನ್ನು ಈ ಸಮಾರಂಭದಲ್ಲಿ ಬೆಂಗಳೂರು ನಗರಾಭಿವೃದ್ಧಿ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಉಪಸ್ಥಿತರಿದ್ದರು.