7 ದಿನಗಳ ಹೋಂ ಕ್ವಾರಂಟೈನ್ ರದ್ದು – ವಿದೇಶದಿಂದ ಆಗಮಿಸುವ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ…

71
firstsuddi

ನವದೆಹಲಿ : ದೇಶದಲ್ಲಿ ಕೋವಿಡ್-19 ಪ್ರಕರಣಗಳು ಕಡಿಮೆಯಾಗುತ್ತಿರುವ ಬೆನ್ನಲ್ಲೇ ಅಂತಾರಾಷ್ಟ್ರೀಯ ಪ್ರಯಾಣ ಮಾರ್ಗಸೂಚಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಹತ್ವದ ಪರಿಷ್ಕರಣೆ ಮಾಡಿದ್ದು, ಇದೀಗ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಹೊಸ ಮಾರ್ಗಸೂಚಿ ಫೆಬ್ರವರಿ 14ರಿಂದ ಜಾರಿಗೊಳ್ಳಲಿದ್ದು, ಪರಿಷ್ಕೃತ ನಿಯಮಗಳ ಪ್ರಕಾರ ಅಂತಾರಾಷ್ಟ್ರೀಯ ವಿಮಾನಗಳಲ್ಲಿ ಆಗಮಿಸುವ ಪ್ರಯಾಣಿಕರಿಗೆ ಆರ್​​ಟಿ-ಪಿಸಿಆರ್ ಹಾಗೂ ಕ್ವಾರಂಟೈನ್ ಕಡ್ಡಾಯವಲ್ಲ ಎಂದು ತಿಳಿಸಿದೆ. ಆದರೆ, ರೋಗ ಲಕ್ಷಣ ಕಾಣಿಸಿಕೊಂಡಿರುವವರು 14 ದಿನಗಳ ಕಾಲ ಸ್ವಯಂ ನಿರ್ಬಂಧಕ್ಕೆ ಒಳಗಾಗಬೇಕು ಎಂದು ಸೂಚಿಸಿದೆ.

ಏರ್ ಸುವಿಧಾ ವೆಬ್ ಪೋರ್ಟಲ್ ನಲ್ಲಿ ತಾವು ಪ್ರಯಾಣ ಬೆಳೆಸಿದ 72 ಗಂಟೆಗಳ ಒಳಗೆ ಕೋವಿಡ್ ಆರ್​​ಟಿ-ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಅಪ್ಲೋಡ್ ಮಾಡಬೇಕು. ಇದರ ಜೊತೆಗೆ ಕೋವಿಡ್ ವ್ಯಾಕ್ಸಿನ್ ನ ಎರಡು ಡೋಸ್ ಪಡೆದುಕೊಂಡಿರುವ ಬಗ್ಗೆ ಪ್ರಮಾಣ ಪತ್ರ ಸಹ ಅಪ್ ಲೋಡ್ ಮಾಡುವಂತೆ ತಿಳಿಸಿದೆ. ಕೆನಡಾ, ಹಾಂಗ್ ಕಾಂಗ್, ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಕಿಂಗ್ ಡಮ್, ಬಹ್ರೇನ್, ಕತಾರ್, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ ಮತ್ತು ಕೆಲವು ಯುರೋಪಿಯನ್ ರಾಷ್ಟ್ರಗಳು ಸೇರಿ ಒಟ್ಟು 82 ದೇಶಗಳಿಂದ ಬರುವವರಿಗೆ ಈ ಆಯ್ಕೆ ಸೌಲಭ್ಯ ನೀಡಲಾಗಿದೆ.