ರಾಜ್ಯದಲ್ಲಿ 4 ತಿಂಗಳ ಗಂಡು ಮಗು ಸೇರಿ 7 ಮಂದಿಗೆ ಕೊರೊನಾ ಪಾಸಿಟಿವ್…

145
firstsuddi

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆಯುತ್ತಲೇ ಇದ್ದು, ರಾಜ್ಯದಲ್ಲಿ ಇಂದು 7 ಕೊರೊನಾ ಪ್ರಕರಣ ದಾಖಲಾಗಿದ್ದು, ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 425ಕ್ಕೆ ಏರಿಕೆಯಾಗಿದೆ. ಕಲಬುರಗಿ ಜಿಲ್ಲೆಯಲ್ಲಿ 4 ತಿಂಗಳ ಗಂಡು ಮಗು ಸೇರಿದಂತೆ 5 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಬೆಂಗಳೂರಿನಲ್ಲಿ 2 ದಿನದ ಬಳಿಕ ಇಂದು 2 ಕೊರೊನಾ ಪ್ರಕರಣ ಪತ್ತೆಯಾಗಿದೆ.