73ನೇ ಗಣರಾಜ್ಯೋತ್ಸವ ಸಂಭ್ರಮ – ದೇಶದ ಜನತೆಗೆ ಶುಭಾಶಯ ಕೋರಿದ ಮೋದಿ, ಅಮಿತ್ ಶಾ.

63
firstsuddi

ನವದೆಹಲಿ : ದೇಶದಾದ್ಯಂತ 73 ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಶುಭಾಶಯಗಳನ್ನು ಕೋರಿದ್ದಾರೆ.

ಎಲ್ಲರಿಗೂ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಜೈ ಹಿಂದ್ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಗೃಹ ಸಚಿವ ಅಮಿತ್ ಶಾ ಕೂಡ ದೇಶದ ಜನರಿಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ. ಗಣತಂತ್ರ ಭಾರತದ ಗೌರವ, ಏಕತೆ ಮತ್ತು ಸಮಗ್ರತೆಯನ್ನು ಕಾಪಾಡಲು ತಮ್ಮ ಜೀವ-ಜೀವನವನ್ನೇ ಪಣವಾಗಿ ಇಟ್ಟ ಮತ್ತು ಇಡುತ್ತಿರುವ ಎಲ್ಲ ಯೋಧರಿಗೂ ನನ್ನ ಕೃತಜ್ಞತಾಪೂರ್ವಕ ಶುಭ ಹಾರೈಕೆಗಳು ಎಂದು ಟ್ವೀಟ್ ಮಾಡಿದ್ದಾರೆ.