ಕೊಪ್ಪಳ : ಜಿಲ್ಲೆಯ 9 ಶಾಲೆಗಳ 73 ವಿದ್ಯಾರ್ಥಿಗಳು, 6 ಶಿಕ್ಷಕರು, ಓರ್ವ ಅಡುಗೆ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಆ ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ.
ಕೊಪ್ಪಳ ತಾಲೂಕಿನ ಶಿವಪುರದ ಹಿರಿಯ ಪ್ರಾಥಮಿಕ ಶಾಲೆ, ಗಂಗಾವತಿ ತಾಲೂಕಿನ ಆಚಾರ್ ನರಸಾಪೂರ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆ, ಮರಳಿಯ ಹಿರಿಯ ಪ್ರಾಥಮಿಕ ಶಾಲೆ, ಕುಷ್ಟಗಿ ಪಟ್ಟಣದ ಇಂದಿರಾಗಾಂಧಿ ವಸತಿ ಶಾಲೆ ಹಾಗೂ ಪಟ್ಟಣದ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆ, ಕುಷ್ಟಗಿ ತಾಲೂಕಿನ ಹನುಮಸಾಗರ ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ಕರ್ನಾಟಕ ಪಬ್ಲಿಕ್ ಶಾಲೆ ಮತ್ತು ಕುಕನೂರು ತಾಲೂಕಿನ ತಳಕಲ್ ಗ್ರಾಮದ ಆರ್ಎಂಎಸ್ ಎ ವಸತಿ ಶಾಲೆಯಲ್ಲಿ ಕೊರೊನಾ ಸ್ಫೋಟಗೊಂಡಿದೆ. ಹೀಗಾಗಿ ಇಂದಿನಿಂದ ಜನವರಿ 26ರವರೆಗೂ ಈ 9 ಶಾಲೆಗಳನ್ನು ಮುಚ್ಚುವಂತೆ ಜಿಲ್ಲಾಡಳಿತ ಘೋಷಣೆ ಮಾಡಿದೆ.










