74ನೇ ಸ್ವಾತಂತ್ರ್ಯೋತ್ಸವ-ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ…

147
firstsuddi

ನವದೆಹಲಿ : ಇಂದು ದೇಶದಾದ್ಯಂತ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ಈ ಬಾರಿ ತುಂಬಾ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದ್ದು, ಕೊರೊನಾ ಭೀತಿ ನಡುವೆಯೂ ಮುನ್ನೆಚ್ಚರಿಕೆ ವಹಿಸಿಕೊಂಡು ಪ್ರಧಾನಿ ಮೋದಿ ಅವರು ಧ್ವಜಾರೋಹಣ ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ಕೆಂಪುಕೋಟೆಗೆ ಆಗಮಿಸುವ ಮೊದಲು ರಾಷ್ಟ್ರಪಿತ ಮಹಾತ್ಮ ಗಾಂಧಿ ಸಮಾಧಿ ರಾಜ್‍ಘಾಟ್‍ಗೆ ಭೇಟಿ ನೀಡಿ ಪುಷ್ಪನಮನ ಸಲ್ಲಿಸಿದರು. ಬಳಿಕ ಕೆಂಪುಕೋಟೆಗೆ ಆಗಮಿಸಿದ ಮೋದಿ ಅವರಿಗೆ ಭಾರತೀಯ ಸೇನೆಯಿಂದ ಗೌರವ ಸಲ್ಲಿಸಲಾಯಿತು. ಬಳಿಕ ಧ್ವಜಾರೋಹಣ ನೆರವೇರಿಸಿದರು.