74ನೇ ಕಲ್ಯಾಣ ಕರ್ನಾಟಕ ಉತ್ಸವ – ವಲ್ಲಭಾಯಿ ಪಟೇಲರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಸಿಎಂ.

90
firstsuddi

ಕಲಬುರಗಿ: 74ನೇ ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಗರದ ಡಿ.ಆರ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಮಾಡಿದರು. ಬಳಿಕ ನಗರದ ಸರ್ದಾರ ವಲ್ಲಭ ಭಾಯಿ ವೃತ್ತದಲ್ಲಿರುವ ಸರ್ದಾರ ವಲ್ಲಭ ಭಾಯಿ ಪಟೇಲರ ಪ್ರತಿಮೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸಿಎಂ, ಕೆಕೆಆರ್ ಡಿಬಿಗೆ ವಾರ್ಷಿಕ 3000 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ. ಈಗ 1500 ಕೋಟಿ ರೂ. ಸರಕಾರದಿಂದ ಅನುದಾನ ನೀಡಲಾಗುತ್ತಿದೆ. ಹೆಚ್ಚುವರಿಯಾಗಿ ಮೂರು ಸಾವಿರ ಕೋಟಿ ಹಣ ಅನುದಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಅಲ್ಲದೇ ನಂಜುಂಡಪ್ಪ ವರದಿ ಮತ್ತೆ 5 ವರ್ಷಗಳ ವಿಸ್ತರಣೆ ಹಾಗೂ ಪ್ರತಿ ಎರಡು ತಿಂಗಳಿಗೊಮ್ಮೆ ಕೆಕೆಆರ್ ಡಿಬಿ- ನಂಜುಂಡಪ್ಪ ವರದಿ ಪ್ರಗತಿ ಪರಿಶೀಲನೆ ನಡೆಸುವುದಾಗಿ ಸಿಎಂ ಮಾಹಿತಿ ನೀಡಿದ್ದಾರೆ. ಕೆಕೆಆರ್ ಡಿಬಿಗೆ ಖಾಯಂ ಕಾರ್ಯದರ್ಶಿ ನೇಮಕ ಮಾಡುತ್ತೇವೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಪ್ರತ್ಯೇಕ ಸೆಲ್ ಅನ್ನು ನಗರದಲ್ಲಿ ಪ್ರಾರಂಭ ಮಾಡಲಾಗುವುದು. ನಮ್ಮ ಚಿಂತನೆ ಮತ್ತು ಕಾರ್ಯಯೋಜನೆಯಲ್ಲಿ ಬದಲಾವಣೆಯನ್ನು ತರಲಿದ್ದೇವೆ. ಸ್ವಲ್ಪ ಸಮಯ ಕೊಡಿ. ಅಮುಲಾಗ್ರ ಬದಲಾವಣೆ ತರುವ ಕೆಲಸ ನಾನು ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.