ಇಸ್ಲಾಮಾಬಾದ್ : 1947ರಲ್ಲಿ ಪಾಕಿಸ್ತಾನ ಮತ್ತು ಭಾರತ ವಿಭಜನೆಯಾಗಿತ್ತು. ಈ ವೇಳೆ ದೂರ ಆಗಿದ್ದ ಸಹೋದರರು ಮತ್ತೆ 74 ವರ್ಷಗಳ ಬಳಿಕ ಒಂದಾಗಿದ್ದಾರೆ. ಈ ಭಾವನಾತ್ಮಕವಾದ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಮೊಹಮ್ಮದ್ ಸಿದ್ದಿಕ್ ಮತ್ತು ಅವರ ಹಿರಿಯ ಸಹೋದರ ಹಬೀಬ್ ಬೇರೆ ಆಗಿದ್ದರು. ಈ ವೇಳೆ ಇನ್ನೂ ಮಗುವಾಗಿದ್ದ ಮೊಹಮ್ಮದ್ ಸಿದ್ದಿಕ್ ಪಾಕಿಸ್ತಾನದಲ್ಲಿಯೇ ಉಳಿದುಕೊಂಡರು. ಆದರೆ ಹಬೀಬ್ ಅವರು ಭಾರತದಲ್ಲಿಯೇ ವಾಸಿಸುತ್ತಿದ್ದರು. ಇದೀಗ ಈ ಇಬ್ಬರು ಸಹೋದರರು ಪಾಕಿಸ್ತಾನದ ಗುರುದ್ವಾರ ದರ್ಬಾರ್ ಸಾಹಿಬ್ ನಿಂದ ಭಾರತಕ್ಕೆ ಸಂಪರ್ಕ ಕಲ್ಪಿಸುವ ಕರ್ತಾರ್ಪುರ ಕಾರಿಡಾರ್ ನಲ್ಲಿ ಮತ್ತೆ ಒಂದಾಗಿದ್ದಾರೆ.
ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಈ ವೀಡಿಯೋಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.










