77ನೇ ಸ್ವಾತಂತ್ರ್ಯ ದಿನಾಚರಣೆ: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ.

75
firstsuddi

ಬೆಂಗಳೂರು: ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ
ಅಂಗವಾಗಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ತಿಳಿಸಿದ್ದಾರೆ.

ಬಳಿಕ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಸ್ವಾತಂತ್ರ್ಯ ಎಷ್ಟು ದುಬಾರಿ ಸಂಗತಿ ಎಂಬುದು ನಮಗೆ ಅರ್ಥವಾಗಬೇಕು. ದುಷ್ಟರ ಆಟ ಬಹಳ ದಿನ ನಡೆಯುವುದಿಲ್ಲ ಎಂದು ರಾಜ್ಯದ ಜನ ಸಾಬೀತು ಮಾಡಿದ್ಧಾರೆ. ಸದ್ಯ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ತಾತ್ವಿಕ ಅನುಮೋದನೆ ನೀಡಲಾಗಿದೆ. ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ನಮ್ಮ ಆಶ್ವಾಸನೆ ಈಡೇರಿಸಿದ್ದೇವೆ. ಗ್ಯಾರಂಟಿ ಯೋಜನೆಗಳಿಂದ ಬಡ, ಮಧ್ಯಮ ವರ್ಗದ ಕುಟುಂಬಗಳಲ್ಲಿ ಬದಲಾವಣೆ ತಂದಿದೆ. ಯಾವುದೇ ಮಧ್ಯವರ್ತಿಗಳ ಕಾಟವಿಲ್ಲದೆ ನೇರವಾಗಿ ಜನರಿಗೆ ತಲುಪುತ್ತಿವೆ. ಹಸಿವು ಮುಕ್ತ ಕರ್ನಾಟಕ ನಮ್ಮ ಸಂಕಲ್ಪವಾಗಿದೆ ಎಂದು ಹೇಳಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಮಾಣಿಕ್ ಷಾ ಪರೇಡ್ ಮೈದಾನ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಇನ್ನು ಮಾಣಿಕ್ ಷಾ ಪರೇಡ್ ಗ್ರೌಂಡ್ ನಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಹೆಚ್ಚಿನ ಜನ ಆಗಮಿಸುವ ಹಿನ್ನಲೆ ಪೊಲೀಸರು ಮೈದಾನದ ಸುತ್ತ ಹದ್ದಿನ ಕಣ್ ಇಟ್ಟಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸಿದ್ದು, ಕಾನೂನು ಸುವ್ಯವಸ್ಥೆ ಹಾಗೂ ಸಂಚಾರಿ ಪೊಲೀಸರು ಎರಡು ರೀತಿಯಲ್ಲಿ ಅಗತ್ಯ ತಯಾರಿ ಮಾಡಿಕೊಂಡಿದ್ದಾರೆ.