77ನೇ ಸ್ವಾತಂತ್ರ್ಯ ದಿನಾಚರಣೆ: ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಮಾಜಿ ಯೋಧ ನಾಯಕ್ ಪುಟ್ಟರಾಜು.

73
firstsuddi

ಚಿಕ್ಕಮಗಳೂರು: ಎಪ್ಪತ್ತೇಳನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಗರದ ಸಂಜೀವಿನಿ ವಿದ್ಯಾಸಂಸ್ಥೆಯಲ್ಲಿ ಇಂದು ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮಾಜಿ ಯೋಧ ನಾಯಕ್ ಪುಟ್ಟರಾಜು, ಲಕ್ಷಾಂತರ ದೇಶಭಕ್ತರ ತ್ಯಾಗ ಮತ್ತು ಬಲಿದಾನದಿಂದ ದೊರೆತಿರುವ ಸ್ವಾತಂತ್ರ್ಯವನ್ನು ಇಂದಿನ ಪೀಳಿಗೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ವಿದ್ಯಾರ್ಥಿಗಳಿಂದ ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಿಹಿ ವಿತರಿಸಲಾಯಿತು.

ಸಂಜೀವಿನಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷೆ ಎಸ್.ಶಾಂತಕುಮಾರಿ, ಖಜಾಂಚಿ ಎಂ.ಪಿ.ಉಡುಪ, ಪ್ರಾಂಶುಪಾಲ ಎನ್.ಆರ್.ಪವನ್‍ಕುಮಾರ್, ಮುಖ್ಯ ಶಿಕ್ಷಕಿ ಕುಮುದಾಕಿಣಿ ಹಾಜರಿದ್ದರು.