78ನೇ ವಸಂತಕ್ಕೆ ಕಾಲಿಟ್ಟ ಸಿಎಂ ಬಿಎಸ್‍ವೈ-ಇಂದೇ ಅದೃಷ್ಟದ ಕಾವೇರಿ ನಿವಾಸಕ್ಕೆ ಎಂಟ್ರಿ…

174
firstsuddi

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು 78ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಜನ್ಮದಿನದಂದೇ ಯಡಿಯೂರಪ್ಪ ಅವರು ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ಧವಳಗಿರಿ ನಿವಾಸದಿಂದ ಅಧಿಕೃತ ಬಂಗಲೆ ಕಾವೇರಿ ನಿವಾಸದತ್ತ ತೆರಳಿದ್ದಾರೆ. ಇಂದು ಅವರ ಹುಟ್ಟುಹಬ್ಬದ ಹಿನ್ನೆಲೆ, ಇಂದು ಸಂಜೆ ಅರಮನೆ ಮೈದಾನದ ವೈಟ್‍ಪೆಟಲ್ಸ್ ಸಭಾಂಗಣದಲ್ಲಿ ಮುಖ್ಯಮಂತ್ರಿಗೆ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿದೆ. ಈ ಸಮಾರಂಭದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರು ಭಾಗವಹಿಸಲಿದ್ದಾರೆ ಎನ್ನಲಾಗಿದೆ.