ಛತ್ತೀಸ್‍ಘಡ : ನಕ್ಸಲರು ಹಾಗೂ ಸೇನಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಕಾರ್ಯಾಚರಣೆ ವೇಳೆ ಸೇನಾ ಪಡೆ 7 ಮಂದಿ ನಕ್ಸಲರನ್ನು ಹೊಡೆದುರುಳಿಸಿದ್ದಾರೆ. ಛತ್ತೀಸ್‍ಘಡದ ಸೀತಾಕೋಟಾ ಕಾಡಿನ ಮಧ್ಯೆ ನಕ್ಸಲರು ಅಡಗಿ ಕುಳಿತಿರುವ ಖಚಿತ ಮಾಹಿತಿಯನ್ನು ತಿಳಿದ ಭದ್ರತಾ ಪಡೆಗಳು ನಕ್ಸಲರಿರುವ ಪ್ರದೇಶವನ್ನು ಸುತ್ತುವರೆದು ಕಾರ್ಯಾಚರಣೆ ನಡೆಸಿದ್ದು, ಸುಮಾರು 2ಗಂಟೆಗಳ ಕಾಲ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆ 7ಮಂದಿ ನಕ್ಸಲರನ್ನು ಹೊಡೆದುರುಳಿಸಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.










