8ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ…

67
firstsuddi

ಬೆಂಗಳೂರು: ನಗರದ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ಅಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ 8ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಪಿಇಎಸ್ ಕಾಲೇಜಿನ ಬಿ ಟೆಕ್ ಸೆಕೆಂಡ್ ಸೆಮಿಸ್ಟರ್ ವಿದ್ಯಾರ್ಥಿ ಆದಿತ್ಯ ಪ್ರಭು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮೃತ ವಿದ್ಯಾರ್ಥಿ ಆದಿತ್ಯ ಪ್ರಭು ಮೂಲತಃ ಮಂಗಳೂರಿನವನು. 

ಆದಿತ್ಯ, ಪರೀಕ್ಷೆಯಲ್ಲಿ ಮೊಬೈಲ್ ನೋಡಿಕೊಂಡು ಕಾಪಿ ಮಾಡುತ್ತಿದ್ದುದನ್ನು ಗುರುತಿಸಿದ ಉಪನ್ಯಾಸಕರು ಆತನ ಮೊಬೈಲ್ ಕಸಿದುಕೊಂಡು ಹೊರಗೆ ಕಳುಹಿಸಿದ್ದಾರೆ. ಇಷ್ಟಕ್ಕೇ ಸುಮ್ಮನಾಗದೇ ಉಪನ್ಯಾಸಕರು ವಿದ್ಯಾರ್ಥಿ ಆದಿತ್ಯ ಪ್ರಭು ಅವರ ತಾಯಿಗೆ ಕರೆ ಮಾಡಿ ಕಾಪಿ ಹೊಡೆಯುತ್ತಿದ್ದ ಬಗ್ಗೆ ತಿಳಿಸಿದ್ದಾರೆ. ಇದರಿಂದ ಮನನೊಂದ ವಿದ್ಯಾರ್ಥಿ ಕಾಲೇಜಿನ ಎಂಟನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮರ್ಯಾದೆ ಹೋಗುತ್ತೆ ಅಂತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಗಿರಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.