ಇಂದು ರಾಜ್ಯದಲ್ಲಿ 8 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 520ಕ್ಕೆ ಏರಿಕೆ…

294
firstsuddi

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ಒಂದೇ ದಿನ 8 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 520ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇಂದು ಕಲಬುರಗಿ ಜಿಲ್ಲೆಯೊಂದರಲ್ಲೇ 6 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಬೆಂಗಳೂರು ಹಾಗೂ ಗದಗ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣ ದಾಖಲಾಗಿದೆ. 520 ಮಂದಿ ಸೋಂಕಿತರ ಪೈಕಿ 20 ಮಂದಿಗೆ ಸೋಂಕಿನಿಂದ ಬಲಿಯಾಗಿದ್ದು, 198 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನುಳಿದ 302 ಮಂದಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.