80 ಕೋಟಿ ಫಲಾನುಭವಿಗಳಿಗೆ ಉಚಿತ ಆಹಾರಧಾನ್ಯ ವಿತರಣೆ : ಕೇಂದ್ರ ಸರ್ಕಾರದ ಮಹತ್ವದ ಘೋಷಣೆ..!

118
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಉಲ್ಬಣಗೊಂಡಿದ್ದು, ನಿತ್ಯ ಸಾವಿರಾರು ಮಂದಿ ಕೊರೊನಾ ವೈರಸ್ ಗೆ ಬಲಿಯಾಗುತ್ತಿದ್ದಾರೆ. ಕೆಲವೊಂದು ರಾಜ್ಯಗಳಲ್ಲಿ ಲಾಕ್ ಡೌನ್ ಘೋಷಣೆಯಾಗಿರುವ ಕಾರಣ ಕೂಲಿ ಕಾರ್ಮಿಕರು, ಬಡವರು ತೊಂದರೆ ಅನುಭವಿಸುವಂತಾಗಿದೆ. ಈ ಹಿನ್ನಲೆಯಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಮೇ ಮತ್ತು ಜೂನ್ 2021 ಕ್ಕೆ 80 ಕೋಟಿ ಫಲಾನುಭವಿಗಳಿಗೆ 5 ಕೆ.ಜಿ ಉಚಿತ ಆಹಾರ ಧಾನ್ಯ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಈ ಯೋಜನೆಗೋಸ್ಕರ 26,000 ಕೋಟಿ ರೂ.ಗಿಂತಲೂ ಅಧಿಕ ಹಣವನ್ನು ಭಾರತ ಸರ್ಕಾರ ಖರ್ಚು ಮಾಡುತ್ತಿದೆ.

ಕಳೆದ ವರ್ಷ ಲಾಕ್ ಡೌನ್ ನಿಂದಾಗಿ ಕೂಲಿ ಕಾರ್ಮಿಕರು ಹಾಗೂ ಬಡವರಿಗೆ ಆದ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು ಮತ್ತೆ ಇಂತಹ ತೊಂದರೆ ಆಗಬಾರದೆಂದು ಕೇಂದ್ರ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ.