80 ವರ್ಷ ಮೇಲ್ಪಟ್ಟವರು, ವಿಶೇಷ ಚೇತನರಿಗೆ ಮನೆಯಿಂದಲೇ ಮತ ಚಲಾಯಿಸಲು ಅವಕಾಶ…

60
firstsuddi

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟವಾಗಿದ್ದು, ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರು, ವಿಶೇಷ ಚೇತನರಿಗೆ ಮನೆಯಿಂದಲೇ ಮತ ಚಲಾಯಿಸಲು ಅವಕಾಶ ನೀಡಲಾಗಿದೆ.

ಈ ಬಗ್ಗೆ ಇಂದು ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಕರ್ನಾಟಕದಲ್ಲಿ ಒಟ್ಟು 5.21 ಕೋಟಿ ಮತದಾರರು ಇದ್ದು, ಇದರಲ್ಲಿ 80 ವರ್ಷ ಮೇಲ್ಪಟ್ಟವರು ಮತದಾರರು 12,15,763 ಇದ್ದು, 100 ವರ್ಷ ಮೇಲ್ಪಟ್ಟ 16,976 ಮತದಾರರಿದ್ದಾರೆ. ಇನ್ನು ಕರ್ನಾಟಕದಲ್ಲಿ 5.55 ಲಕ್ಷ ವಿಕಲಚೇತನ ಮತದಾರರರು ಇದ್ದಾರೆ. ಇವರೆಲ್ಲರಿಗೂ ಮನೆಯಿಂದ ಮತದಾನ ಮಾಡುವ ಅವಕಾಶ ನೀಡಲಾಗಿದೆ ಎಂದರು.

ಎಲ್ಲರೂ ಮತದಾನ ಮಾಡಲು ಅವಕಾಶ ದೊರೆಯಬೇಕು ಎನ್ನುವ ಉದ್ದೇಶದಿಂದ ಮೊದಲ ಬಾರಿಗೆ ಮತದಾನ ಕೇಂದ್ರಕ್ಕೆ ಬರಲು ಆಗದ 80 ವರ್ಷಕ್ಕೂ ಮೇಲ್ಪಟ್ಟವರು, ಗಂಭೀರ ಅನಾರೋಗ್ಯ ಬಾಧಿತರು ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿದೆ. ಜೊತೆಗೆ ಮತದಾನ ಕೇಂದ್ರದಲ್ಲೂ ಇವರಿಗೆ ವಿಶೇಷ ಸೌಲಭ್ಯ ಮಾಡಲಾಗಿದೆ ಎಂದು ತಿಳಿಸಿದರು.

ಮೇ 10ರಂದು ಮತದಾನ ನಡೆಯಲಿದ್ದು, ಮೇ 13 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಏಪ್ರಿಲ್ 13ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್ 21 ನಾಮಪತ್ರ ಪರಿಶೀಲನೆ ನಡೆಲಿದ್ದು, ಏಪ್ರಿಲ್ 24 ನಾಮಪತ್ರ ವಾಪಸ್ಸಿಗೆ ಕೊನೆಯ ದಿನವಾಗಿದೆ.