ಬೆಂಗಳೂರು: ಬೆಂಗಳೂರಿನಲ್ಲಿ ಡ್ರಿಂಕ್ ಅಂಡ್ ಡ್ರೈವ್ ಗೆ ಮತ್ತೊಂದು ಬಲಿಯಾಗಿದ್ದು, 30 ವರ್ಷದ ಸಂಧ್ಯಾ ಎಂಬ ಮಹಿಳೆ ದುರಂತ ಸಾವಿಗೀಡಾಗಿದ್ದಾರೆ. ಸಣ್ಣದೊಂದು ತಪ್ಪು ಮಾಡದ ಟೆಕ್ಕಿ ಸಂಧ್ಯಾ ಅವರ ಮೇಲೆ ಕುಡಿದು ಬೆನ್ಜ್ ಕಾರು ಓಡಿಸುತ್ತಿದ್ದವರು ಅಟ್ಟಹಾಸ ಮೆರೆದಿದ್ದು, ಕಾರು ಗುದ್ದಿದ ರಭಸಕ್ಕೆ ಸಂಧ್ಯಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಂಧ್ಯಾ ಅವರು ತಮ್ಮ ಕೆಲಸ ಮುಗಿಸಿ ಮನೆಗೆ ಹೊರಟಿದ್ದ ವೇಳೆ ಕೆಂಗೇರಿ ಬಸ್ ನಿಲ್ದಾಣ ಬಳಿ ಈ ಅಪಘಾತ ನಡೆದಿದೆ. ಅಪಘಾತದ ಬಳಿಕ ಸಂಧ್ಯಾ ಅವರಿಗೆ ತೀವ್ರ ರಕ್ತಸ್ರಾವವಾಗಿದೆ. ಕೂಡಲೇ ಸಂಧ್ಯಾ ಸ್ನೇಹಿತರು, ಸ್ಥಳೀಯರು ಬಿಜಿಎಸ್ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸಂಧ್ಯಾ ಒಬ್ಬರಿಗೇ ಅಲ್ಲ ಮುಂದೆ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೂ ಬೆನ್ಜ್ ಕಾರು ಡಿಕ್ಕಿ ಹೊಡೆದಿದೆ. ದ್ವಿಚಕ್ರ ವಾಹನದಲ್ಲಿ ಹೋಗ್ತಿದ್ದ ಸೈಯ್ಯದ್ ಎಂಬ ವ್ಯಕ್ತಿಗೂ ಗಾಯಗಳಾಗಿದ್ದು, ಕುಡಿದ ಮತ್ತಲ್ಲಿ ಅತಿವೇಗವಾಗಿ ಚಾಲನೆ ಮಾಡಿದ್ದೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ. ಈ ಕೇಸನ್ನು ವಾಪಸ್ ಪಡೆಯಲು ಆರೋಪಿ ಮೃತ ಸಂಧ್ಯಾ ಕುಟುಂಬಕ್ಕೆ ಕೋಟಿ ರೂಪಾಯಿ ಕೊಡುವುದಾಗಿ ಆಮೀಶ ಒಡ್ಡಿದ್ದಾನೆ.