86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ – 3 ದಿನ ಅದ್ದೂರಿ ಕನ್ನಡ ಹಬ್ಬ…

45
firstsuddi

ಹಾವೇರಿ : ನಗರದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಧ್ವಜಾರೋಹಣ ನೆರವೇರಿಸುವ ಮೂಲಕ ಇಂದು ಬೆಳಗ್ಗೆ ಚಾಲನೆ ದೊರೆಯಿತು.

ಬೆಳಗ್ಗೆ 7 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಧ್ವಜಾರೋಹಣ ನೆರವೇರಿಸುವ ಮೂಲಕ ಸಾಹಿತ್ಯ ಉತ್ಸವಕ್ಕೆ ಚಾಲನೆ ನೀಡಿದರು. ಸಾಹಿತ್ಯ ಪರಿಷತ್ತಿನ ಧ್ವಜವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್ ಜೋಶಿ, ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗಯ್ಯ ಬಿ. ಹಿರೇಮಠ ನಾಡ ಧ್ವಜದ ಧ್ವಜಾರೋಹಣ ನೆರವೇರಿಸಿದರು.

ಇಂದಿನಿಂದ ಜನವರಿ 8ರ ವರೆಗೆ ಕನ್ನಡ ಸಾಹಿತ್ಯ ಜಾತ್ರೆ ನಡೆಯಲಿದ್ದು, ಮದುವಣಗಿತ್ತಿಯಂತೆ ಹಾವೇರಿ ನಗರಿ ಶೃಂಗಾರಗೊಂಡಿದೆ. ಈವರೆಗೂ ರಾಜ್ಯದಲ್ಲಿ ನಡೆದಿದ್ದ ಸಾಹಿತ್ಯ ಸಮ್ಮೇಳನಕ್ಕಿಂತ ಈ ಬಾರಿ ನಡೆಯುತ್ತಿರುವ ನುಡಿಹಬ್ಬ ಬಹಳ ವಿಶೇಷ ಮತ್ತು ಅದ್ದೂರಿಯಗಿದೆ.