875 ಸಂಸದೀಯ ಸಿಬ್ಬಂದಿಗೆ ಕೊರೊನಾ ಪಾಸಿಟಿವ್…

71
firstsuddi

ನವದೆಹಲಿ : ಜನವರಿ 31 ರಂದು ಪ್ರಾರಂಭವಾಗುವ ಸಂಸತ್ ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ, ಸದನದಲ್ಲಿ ಇದುವರೆಗೆ ಒಟ್ಟು 875 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಜನವರಿ 20ರವರೆಗೆ 2,847 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಈ ಪೈಕಿ 875 ಸಂಸದೀಯ ಸಿಬ್ಬಂದಿಗೆ ಪಾಸಿಟಿವ್ ಬಂದಿದೆ.

ಇನ್ನೂ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ಬಗ್ಗೆ ಟ್ವಿಟ್ಟರ್ ಮೂಲಕ ತಿಳಿಸಿದ ಅವರು, ನಾನು ಹೈದಾರಾಬಾದ್ ನಲ್ಲಿದ್ದು, ನನಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ. ಇನ್ನೂ ಒಂದು ವಾರ ಐಸೋಲೇಷನ್ ಆಗಿರಲು ನಿರ್ಧರಿಸಿದ್ದೇನೆ. ನನ್ನ ಸಂಪರ್ಕದಲ್ಲಿ ಇದ್ದವರು ಐಸೋಲೇಷನ್ ಗೆ ಒಳಗಾಗಿ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಕೊರೊನಾ ಮೊದಲ ಅಲೆ ವೇಳೆ 29 ಸೆಪ್ಟೆಂಬರ್ 2020 ರಲ್ಲೂ ಕೂಡ ವೆಂಕಯ್ಯ ನಾಯ್ಡುರಿಗೆ ಕೊರೊನಾ ಸೋಂಕು ತಗುಲಿತ್ತು.