ಹೈದರಾಬಾದ್ : ವ್ಯಕ್ತಿಯೊಬ್ಬ 9 ತಿಂಗಳ ಮಗುವಿನ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿ ಕೊಲೆ ಮಾಡಿರುವ ಘಟನೆ ತೆಲಂಗಾಣದ ವಾರಂಗಲ್‍ನಲ್ಲಿ ನಡೆದಿದೆ. ಮಗು ತನ್ನ ಪೋಷಕರೊಂದಿಗೆ ಮನೆಯ ಮೇಲ್ಛಾವಣಿಯಲ್ಲಿ ಮಲಗಿದ್ದ ವೇಳೆ ಮಗುವನ್ನು ಬೇರೆಡೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದ್ದು, ಮಗು ಅಳಲು ಪ್ರಾರಂಭಿಸುತ್ತಿದ್ದಂತೆ ಬಾಯಿಗೆ ಬಟ್ಟೆ ತುರುಕಿ ಬಿಗಿಯಾಗಿ ಹಿಡಿದ ಕಾರಣ ಮಗು ಸಾವನ್ನಪ್ಪಿದ್ದು, ಪೋಷಕರು ಮಗು ಕಾಣೆಯಾಗಿದೆ ಎಂದು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಮಗು ಹಾಗೂ ಆರೋಪಿಯನ್ನು ಪತ್ತೆ ಹಚ್ಚಿ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದರೂ ಮಗು ಆಗಾಗಲೇ ಸಾವನ್ನಪ್ಪಿದೆ ಎಂದು ವೈದ್ಯರು ತಿಳಿಸಿದ್ದು, ಪೊಲೀಸರು ಆರೋಪಿ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.










