9 ವರ್ಷದ ಬಾಲಕನ ಮೇಲೆ ಚಿರತೆ ದಾಳಿ…

44
firstsuddi

ಚಾಮರಾಜನಗರ: ಚಿರತೆಯೊಂದು ಬಾಲಕನ ಮೇಲೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಜಿಲ್ಲೆಯ ಯಳಂದೂರು ತಾಲೂಕಿನ ಮಲ್ಲಿಗೆಹಳ್ಳಿಯಲ್ಲಿ ನಡೆದಿದೆ.

ಮಲ್ಲಿಗೆಹಳ್ಳಿ ಗ್ರಾಮದ ಹರ್ಷಿತ್ ದಾಳಿಗೊಳಗಾದ ಬಾಲಕ. ಗ್ರಾಮದ ಪ್ರಾಥಮಿಕ ಶಾಲೆ ಮುಂಭಾಗದಿಂದ ಮನೆಗೆ ತೆರಳುವಾಗ ಅವಿತು ಕುಳಿತಿದ್ದ ಚಿರತೆ ದಾಳಿ ಮಾಡಿದ್ದು ಇದನ್ನು ಕಂಡ ಜನರು ಕೂಗಾಡಿದ್ದಾರೆ. ಜನರ ಕಿರುಚಾಟಕ್ಕೆ ಬೆದರಿದ ಚಿರತೆ ಬಾಲಕನ್ನು ಬಿಟ್ಟು ಗದ್ದೆಯತ್ತ ಓಡಿದೆ.

ಹರ್ಷಿತ್ ನ ಮುಖ, ಗಂಟಲು, ಕಾಲು, ಹೊಟ್ಟೆಯ ಭಾಗಕ್ಕೆ ಚಿರತೆ ಗೀರಿ ಕಚ್ಚಿ ಗಾಯಗೊಳಿಸಿದ್ದು ಯಳಂದೂರು ಆಸ್ಪತ್ರೆಯಲ್ಲಿ ಬಾಲಕನಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ.

ಕೆಲವು ದಿನಗಳ ಹಿಂದೆಯಷ್ಟೇ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ಮನೆ ಮುಂದೆ ಆಟ ಆಡುತ್ತಿದ್ದ 6 ವರ್ಷದ ಬಾಲಕಿ ಮೇಲೆ ಚಿರತೆ ದಾಳಿ ಮಾಡಿತ್ತು. ಬಾಲಕಿ 15 ದಿನಗಳ ಕಾಲ ಚಿಕಿತ್ಸೆ ಪಡೆದರೂ ಫಲಕಾರಿಯಾಗದೇ ಸಾವನ್ನಪ್ಪಿದ್ದಳು.