ದೇಶದಲ್ಲಿ ಒಂದೇ ದಿನ 90,123 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 50,20,360ಕ್ಕೆ ಏರಿಕೆ…

146
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 90,123 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 50,20,360ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 1,290 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 82,066 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 50,20,360 ಮಂದಿ ಸೋಂಕಿತರ ಪೈಕಿ 39,42,361 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 9,95,933 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.