ಛತ್ತೀಸ್ಗಢ: ಬಿಲಾಯಿ ಸ್ಟೀಲ್ ಘಟಕದಲ್ಲಿ ಪೈಪ್ ಲೈನ್ ಸ್ಫೋಟಗೊಂಡ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿರುವ ಘಟನೆ ಛತ್ತೀಸ್ಗಢದಲ್ಲಿ ಇಂದು ಮಧ್ಯಾಹ್ನ ನಡೆದಿದ್ದು, ರಾಜಧಾನಿ ರಾಯಪುರದಿಂದ 30 ಕಿ.ಮೀ. ದೂರದಲ್ಲಿರುವ ಭಿಲಾಯಿ ಉಕ್ಕು ಸ್ಥಾವರದಲ್ಲಿನ ಕೋಕ್ ಓವನ್ ವಿಭಾಗದ ಗ್ಯಾಸ್ ಪೈಪ್ ಲೈನ್‌ನಲ್ಲಿ ಸ್ಫೋಟ ಸಂಭವಿಸಿದ್ದು, 6 ಮಂದಿ ಸಜೀವವಾಗಿ ದಹನಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೋಲೀಸರು ಹಾಗೂ ಅಗ್ನಿಶಾಮಕ ದಳ ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಚರಣೆಯನ್ನು ಮುಂದುವರೆಸಿದ್ದಾರೆ.










