ಮೈಸೂರು: ಇಂದು ಬೆಳಗ್ಗೆ 7.05ಕ್ಕೆ ತುಲಾ ಲಗ್ನದಲ್ಲಿ ಚಾಮುಂಡಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರು ಚಾಮುಂಡಿಬೆಟ್ಟದಲ್ಲಿ ದಸರಾ ಉತ್ಸವಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ದಸರಾ ಉದ್ಘಾಟಿಸುತ್ತಿರುವುದು ನನ್ನ ಜೀವನದ ಅತ್ಯಂತ ಸಂತಸದ ಕ್ಷಣ. ದಸರಾ ಉದ್ಘಾಟಿಸಿರುವುದು ನನ್ನ ಪೂರ್ವಜನ್ಮದ ಪುಣ್ಯ ಎಂದು ಭಾವಿಸುತ್ತೇನೆ.ಕೊಡಗಿನಲ್ಲಿ ನಿರಾಶ್ರಿತರಾದವರಿಗೆ ಮನೆ ಕಟ್ಟಿಕೊಡಲು 25 ಕೋಟಿ ರೂಪಾಯಿಗಳನ್ನು ಕೊಡುವುದಾಗಿ ಸುಧಾಮೂರ್ತಿ ಅವರು ಘೋಷಿಸಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಚಿವೆ ಜಯಮಾಲಾ, ಸಚಿವ ಸಾ.ರಾ.ಮಹೇಶ್, ಸಂಸದ ಪ್ರತಾಪ ಸಿಂಹ, ಜಿ.ಟಿ.ದೇವೇಗೌಡ, ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.










