ಒಡಿಶಾ, ಆಂಧ್ರ ಪ್ರದೇಶಕ್ಕೆ, ಅಪ್ಪಳಿಸಿದ ತಿತ್ಲಿ ಚಂಡಮಾರುತ…

377
firstsuddi

ಭುವನೇಶ್ವರ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ತಿತ್ಲಿ ಚಂಡಮಾರುತ ಒಡಿಶಾ, ಆಂಧ್ರಪ್ರದೇಶ ಕರಾವಳಿಗೆ ಅಪ್ಪಳಿಸಿದ್ದು, ಗಂಜಾಂ ಜಿಲ್ಲೆಯ ಗೋಪಾಲಪುರದಲ್ಲಿ ಇಂದು ಮುಂಜಾನೆಯಿಂದಲೇ ಗಂಟೆಗೆ 126 ಕಿ.ಮೀ.ವೇಗದಲ್ಲಿ ಬೀಸುತ್ತಿರುವ  ಸುಂಟರಗಾಳಿಯಿಂದ ಭಾರೀ ಮಳೆಯಾಗುತ್ತಿದ್ದು, ತಿತ್ಲಿ ಚಂಡಮಾರುತದ ಪರಿಣಾಮ ಗಜಪತಿ, ಗಂಜಾಂ,ಪುರಿ, ಕುರ್ದಾ, ಜಗತ್ ಸಿಂಗ್ ಪುರ್ ಸೇರಿದಂತೆ ಐದು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.